ಉಚಿತ ವಿದ್ಯುತ್ ಯೋಜನೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಉಚಿತ ವಿದ್ಯುತ್ ಯೋಜನೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಉಚಿತ ವಿದ್ಯುತ್ ಯೋಜನೆಯ ಮಾರ್ಗಸೂಚಿಯನ್ನು ಇದೀಗ ಬಿಡುಗಡೆ ಮಾಡಿದ್ದು ಈ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್ ಬಳಕೆಗೆ ಅಗಸ್ಟ್ 2023ರ ತಿಂಗಳಿನಿಂದ ನೀಡುವ ಬಿಲ್ ಗೆ ಅನ್ವಯವಾಗುವಂತೆ ಜಾರಿಗೊಳಿಸಿದೆ.

ಷರತ್ತುಗಳು:

ಪ್ರತಿ ಫಲಾನುಭವಿಯು ತನ್ನ ಕಸ್ಟಮರ್ ಐಡಿ ಅಥವಾ ಅಕೌಂಟ್ ಐಡಿಯನ್ನು ಆಧಾರ್ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸುವುದು. ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುವುದು.

ಈ ಯೋಜನೆಯು ಗೃಹಬಳಕೆಗೆ ಮಾತ್ರ ಅನ್ವಯವಾಗಿದ್ದು ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದ್ದಲ್ಲಿ ಅನ್ವಯವಾಗುವುದಿಲ್ಲ.
ಅರ್ಹ ಯೂನಿಟ್ ನ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದ ಅನ್ವಯ ಯುನಿಟ್ ಗಳ ಮೇಲೆ ಶೇಕಡ ಹತ್ತರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಹಾಕಲಾಗಿದ್ದು ಶೇಕಡ ಹತ್ತರ ಮಿತಿಯನ್ನು ದಾಟಿದರೆ ಎಷ್ಟು ಯೂನಿಟ್ ಖರ್ಚಾಗುತ್ತದೊ ಅಷ್ಟು ಯೂನಿಟ್ ಗೆ ಮಾತ್ರ ಬಿಲ್ ಪಾವತಿಸಬೇಕಾಗುತ್ತದೆ.

200 ಯೂನಿಟ್ ಗಿಂತ ಹೆಚ್ಚಿನ ವಿದ್ಯುತ್ ಬಳಸಿದಲ್ಲಿ ಪೂರ್ತಿ ಮೊತ್ತವನ್ನು ಗ್ರಾಹಕರು ಪಾವತಿಸಬೇಕು.
ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ಲಲ್ಲಿ ಕಡಿತಗೊಳಿಸಿ ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡುವುದು. ಬಾಕಿ ಇರುವ ವಿದ್ಯುತ್ ಶುಲ್ಕದ ಮೊತ್ತವನ್ನು ಜೂನ್ 30ರ ಒಳಗೆ ಪಾವತಿಸಬೇಕು, ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದು.

ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯ ಸೌಲಭ್ಯವನ್ನು ನೀಡಲಾಗುವುದು..
ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!