ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣದ ನಡುವೆ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಸುದ್ದಿ ಹೊರ ಬಿದ್ದಿದೆ…!

ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣದ ನಡುವೆ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಸುದ್ದಿ ಹೊರ ಬಿದ್ದಿದೆ…!

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಹೊಂದಾಣಿಕೆ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಬಿಜೆಪಿಗೆ ಇಂದು ದುರ್ಗತಿ ಬಂದಿದೆ ಎಂದು ಬಿಜೆಪಿಯ ಇಬ್ಬರು ನಾಯಕರು ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ. ಈ ಮಧ್ಯೆ ದಾವಣಗೆರೆಯಲ್ಲಿ ಬಿಜೆಪಿಯ ಕಾರ್ಯಕಾರಿಣಿ ಸಭೆ ನಡೆದಿತ್ತು. ಅದಾದ ಬಳಿಕ ಸಾಯಂಕಾಲ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರ್ ಶಿವಶಂಕರಪ್ಪ ಅವರನ್ನು ರೆಸಾರ್ಟ್ ವೊಂದರಲ್ಲಿ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿತ್ತು ಭಾರೀ ಚರ್ಚೆ ಹುಟ್ಟುಹಾಕಿದೆ.

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬೊಮ್ಮಾಯಿ ಅವರು ದಾವಣಗೆರೆ ಹೊರವಲಯದ ಖಾಸಗಿ ರೆಸಾರ್ಟ್​ನಲ್ಲಿ ಭೇಟಿ ಮಾಡಿದ್ದು, 25 ನಿಮಿಷಗಳ ಕಾಲ ಗುಪ್ತವಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬೊಮ್ಮಾಯಿಯವರು ಮಾತು ಮುಗಿಸಿ ಹೊರಬರುತ್ತಿರುವ ದೃಶ್ಯ ಮಾಧ್ಯಮಗಳಿಗೆ ಲಭ್ಯವಾಗಿದೆ. ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ನಿನ್ನೆ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿ ಪಕ್ಷ ಸೋಲಿಸಿದ್ದೀರಿ ಎಂದು ಹಲವರಿಂದ ಆಕ್ರೋಶ ವ್ಯಕ್ತವಾಗಿತ್ತು. ರಾಜ್ಯದ ಜಿಲ್ಲಾ ನಾಯಕರ ವಿರುದ್ಧ ಕಾರ್ಯಕರ್ತರು ಕಿರಿಕಾರಿದ್ದರು ಎಂದು ತಿಳಿದುಬಂದಿದೆ.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಭರ್ಜರಿ ಗೆಲುವು, ಬಿಜೆಪಿಯ ಹೀನಾಯ ಸೋಲು ಕೇಸರಿ ಪಾಳಯದ ಅನೇಕ ನಾಯಕರಿಗೆ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಚುನಾವಣೆ ಮುಗಿದು ಫಲಿತಾಂಶ ಬಿದ್ದು ಒಂದು ತಿಂಗಳಾದ ಮೇಲೆ ಬಿಜೆಪಿ ಕೆಲ ನಾಯಕರು ಒಬ್ಬೊಬ್ಬರಾಗಿ ಧ್ವನಿ ಎತ್ತುತ್ತಿದ್ದಾರೆ. ಬಿಜೆಪಿ ಹಿರಿಯ ನಾಯಕರು ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಅರ್ಥದಲ್ಲಿ ಪ್ರತಾಪ ಸಿಂಹ ಹಾಗೂ ಸಿಟಿ ರವಿ ಹೇಳಿಕೆ ನೀಡಿರುವುದು ಕಮಲ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ.

Admin

Leave a Reply

Your email address will not be published. Required fields are marked *

error: Content is protected !!