ಭಾರತದಲ್ಲಿ ಫೇಸ್’ಬುಕ್ ಬಂದ್ ಮಾಡುತ್ತೇವೆ: ಹೈಕೋರ್ಟ್ ಎಚ್ಚರಿಕೆ

ಭಾರತದಲ್ಲಿ ಫೇಸ್’ಬುಕ್ ಬಂದ್ ಮಾಡುತ್ತೇವೆ: ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ಮಂಗಳೂರು ಮೂಲದ ಶೈಲೇಶ್ ಕುಮಾರ್ ಎಂಬ ಯುವಕನ ಹೆಸರಿನಲ್ಲಿ ಸೌದಿ ಅರೇಬಿಯಾದ ದೊರೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣದ ತನಿಖೆಗೆ ಸೂಕ್ತ ಸಹಕಾರ ನೀಡಬೇಕು. ಇಲ್ಲದಿದ್ದರೆ ಭಾರತದಲ್ಲಿ ಫೇಸ್ ಬುಕ್ ಕಾರ್ಯಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಸೌದಿ ಅರೇಬಿಯಾ ನ್ಯಾಯಾಲಯದಿಂದ 15 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ ಮೂರು ವರ್ಷಗಳಿಂದ ಅಲ್ಲಿಯೇ ಜೈಲುವಾಸ ಮಾಡುತ್ತಿರುವ ಮಂಗಳೂರಿನ ಬಿಕರನಕಟ್ಟೆ ನಿವಾಸಿ ಶೈಲೇಶ್ ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಈ ಎಚ್ಚರಿಕೆ ನೀಡಿದೆ.

ಘಟನೆ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ಫೇಸ್ ಬುಕ್ ಸಂಸ್ಥೆ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು. ಸುಳ್ಳು ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆತನ ಬಿಡುಗಡೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಮಾಹಿತಿ ನೀಡಬೇಕು.

ಮಂಗಳೂರು ಪೊಲೀಸರು ಸಹ ಈ ಪ್ರಕರಣದ ಸಮರ್ಪಕ ತನಿಖೆ ಕೈಗೊಂಡು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂ.22ಕ್ಕೆ ಮುಂದೂಡಿದೆ.

Admin

Leave a Reply

Your email address will not be published. Required fields are marked *

error: Content is protected !!