ಶಾಲಾ-ಕಾಲೇಜು’ಗಳಲ್ಲಿ ನಾಡಗೀತೆ, ರಾಷ್ಟ್ರಗೀತೆ ಬಳಿಕ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯ

ಶಾಲಾ-ಕಾಲೇಜು’ಗಳಲ್ಲಿ ನಾಡಗೀತೆ, ರಾಷ್ಟ್ರಗೀತೆ ಬಳಿಕ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅವುಗಳಲ್ಲಿ ಪಠ್ಯಪುಸ್ತಕ ಪರಿಷ್ಕರಣೆ, ಮತಾಂತರ ನಿಷೇಧ ಕಾಯ್ದೆ ರದ್ದು ಸೇರಿದಂತೆ ಇತರೆ ವಿಚಾರಗಳು ಸೇರಿವೆ.

ಅಲ್ಲದೇ ಇನ್ಮುಂದೆ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ. ಆ ಬಗ್ಗೆ ಮುಂದೆ ಓದಿ.

ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ನಂತ್ರ ಇಂದು ವಿಧಾನಸೌಧದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು ಸಂವಿಧಾನ ಪ್ರಿಯಾಂಬಲ್ ಶಾಲಾ ಕಾಲೇಜಿಗಳಲ್ಲಿ ಓದುವುದಕ್ಕೆ ಅವಕಾಶ ನೀಡಲಾಗಿದೆ. ನಾಡಗೀತೆ, ರಾಷ್ಟ್ರಗೀತೆ ನಂತರ ಓದುವುದು ಕಡ್ಡಾಯಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!