ನಟಿಯ ಬಂಧನ ಜಾಮೀನಿನ ಮೇಲೆ ಬಿಡುಗಡೆ ಯಾರು ಈ ನಟಿ ಏನಿದು ಪ್ರಕರಣ..??
ಶಿವಮೊಗ್ಗ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ನಟಿಯೊಬ್ಬರ ಬಂಧನ – ಜಾಮೀನಿನ ಮೇಲೆ ಬಿಡುಗಡೆಯಾಗಿದೆ. ವಿಚಾರಣೆಗೆ ಹಾಜರಾಗದ ಹಿನ್ನೆಲೆ ಸಿನಿಮಾ ನಟಿಯೊಬ್ಬಳ ವಿರುದ್ಧ ಶಿವಮೊಗ್ಗ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನಲೆಯಲ್ಲಿ ವಿನೋಬನಗರ ಠಾಣೆ ಪೊಲೀಸರು ನಟಿಯನ್ನು ಬಂಧಿಸಿ ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಯಾರು ನಟಿ..?
ನಟಿ ಉಷಾ ಸಲಗ ಸಿನಿಮಾದಲ್ಲಿ ಸಹ ಕಲಾವಿದೆಯಾಗಿ ಅಭಿನಯಿಸಿದರು ಕಿರುತೆರೆ ಧಾರವಾಹಿಗಳಲ್ಲು ನುಡಿಸುತ್ತಿದ್ದರು ಎನ್ನಲಾಗಿದ್ದು ಬೆಂಗಳೂರಿನಲ್ಲಿ ನಟಿ ಉಷಾಳನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ಏನಿದು ಪ್ರಕರಣ..?
ನಟಿ ಉಷಾ ವಿರುದ್ಧ ಶಿವಮೊಗ್ಗದ ಶರವಣನ್ ಎಂಬಾತ ವಂಚನೆ ದೂರು ನೀಡಿದ್ದರು ತನ್ನಿಂದ ಹಣ ಪಡೆದು ಉಷಾ ಮರಳಿಸಿಲ್ಲ ಎಂದು ಆರೋಪಿಸಿ ಶರವಣನ್ ಶಿವಮೊಗ್ಗ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು ವಿಚಾರಣೆಗೆ ನಟಿ ಉಷಾ ಹಾಜರಾಗದ ಹಿನ್ನೆಲೆ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿತ್ತು.