ಹವಾಮಾನ ವರದಿ : ಜೂ.30ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಹವಾಮಾನ ವರದಿ : ಜೂ.30ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ,ಯಾದಗಿರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಸದ್ಯ ಮಲೆನಾಡಲ್ಲಿ ಶೇ. 77, ಕರಾವಳಿಯಲ್ಲಿ ಶೇ. 66, ಉತ್ತರ ಕರ್ನಾಟಕದಲ್ಲಿ ಶೇ. 58 ಹಾಗೂ ದಕ್ಷಿಣ ಕರ್ನಾಟಕದಲ್ಲಿ ಶೇ.22 ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದ್ದು, ರೈತಾಪಿ ವರ್ಗ ದಯನೀಯ ಸ್ಥಿತಿ ಎದುರಿಸುವಂತಾಗಿದೆ.

News by: Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!