ವಕ್ಫ್ ಕಾಯ್ದೆಯನ್ನು ಕೂಡಲೇ ರದ್ದುಗೊಳಿಸಿ – ಪರಶುರಾಮ, ಹಿಂದೂ ಜನ ಜಾಗೃತಿ ಸಮಿತಿ

ವಕ್ಫ್ ಕಾಯ್ದೆಯನ್ನು ಕೂಡಲೇ ರದ್ದುಗೊಳಿಸಿ – ಪರಶುರಾಮ, ಹಿಂದೂ ಜನ ಜಾಗೃತಿ ಸಮಿತಿ

ಶಿಕಾರಿಪುರ :ಹಿಂದೂಗಳ ಭೂಮಿಯನ್ನು ಕಬಳಿಸಲು ವಕ್ಫ್ ಬೋರ್ಡ್ ಗೆ ಅನುಕೂಲವಾಗುವ ವಕ್ಫ್ ಕಾಯ್ದೆಯನ್ನು ದೇಶದಲ್ಲಿ ಕೂಡಲೇ ರದ್ದುಗೊಳಿಸಬೇಕೆಂದು ಹಿಂದೂ ಜನ ಜಾಗೃತಿ ಸಮಿತಿಯ ಪರಶುರಾಮ ಆಗ್ರಹಿಸಿದರು,

ಶಿಕಾರಿಪುರದ ತಾಲೂಕು ಕಛೇರಿ ಆವರಣದಲ್ಲಿ ಶುಕ್ರವಾರ ನಡೆದ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಮಾತನಾಡಿದ ಅವರು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ತನ್ನ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಸರಕಾರಿ ಮತ್ತು ಖಾಸಗಿ ಜಮೀನುಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ.

ಆ ಮೂಲಕ ದೇಶದಲ್ಲಿ 8 ಲಕ್ಷ ಎಕರೆ ಜಮೀನನ್ನು ಕಬಳಿಸಿದೆ, ಇದೊಂದು ದೊಡ್ಡ ಲ್ಯಾಂಡ್ ಜಿಹಾದ್ ಆಗಿದೆ. ಹೀಗಾಗಿ ಈ ಕಾನೂನನ್ನು ರದ್ದುಗೊಳಿಸಿ ಜಮೀನಿನ ನಿಜವಾದ ಮಾಲೀಕರಿಗೆ ಅದರ ಅಧಿಕಾರವನ್ನು ನೀಡಬೇಕು ಮತ್ತು ದೇಶದಲ್ಲಿ ಸಮಾನ ನಾಗರಿಕ ಕಾನೂನು ಜಾರಿಗೆ ತರುವ ಮೂಲಕ ಅಲ್ಪಸಂಖ್ಯಾತರ ಹೆಸರಿನಲ್ಲಿ ಜಾರಿಯಲ್ಲಿರುವ ಎಲ್ಲಾ ವಿಶೇಷ ಸೌಲಭ್ಯಗಳು, ಕಾನೂನುಗಳು, ಆಯೋಗಗಳು, ಮಂಡಳಿಗಳು, ಸರಕಾರಿ ಇಲಾಖೆಗಳನ್ನು ರದ್ದುಪಡಿಸಬೇಕು ಮತ್ತು ಎಲ್ಲರಿಗೂ ಸಮಾನ ನಡವಳಿಕೆ ಸಿಗುವಂತಾಗಬೇಕು, ಈ ಬೇಡಿಕೆಗಳನ್ನು ಅಂಗೀಕರಿಸದಿದ್ದರೆ ವಕ್ಫ್ ಕಾನೂನಿನ ವಿರುದ್ಧ ಪ್ರಬಲ ಚಳವಳಿ ನಡೆಸಬೇಕಾಗುತ್ತದೆ ಎಂದರು.

ಜಯಕರ್ನಾಟಕ ಜನಪರ ವೇದಿಕೆಯ ಕಾರ್ಯಾಧ್ಯಕ್ಷರಾದ ಶ್ರೀ ಶಿವಯ್ಯ ಶಾಸ್ತ್ರಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ, ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ, ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ ಶ್ರೀ ವೇಣುಗೋಪಾಲ್ ಇವರ ಹತ್ಯೆ ಸೇರಿದಂತೆ ಇನ್ನು ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ, ಹೀಗಾಗಿ ಹಿಂದೂ ಕಾರ್ಯಕರ್ತರಿಗೆ, ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯ ನಂತರ ತಹಶೀಲ್ದಾರ್ ಶಂಕರಪ್ಪ ರವರಿಗೆ ಹಿಂದೂ ಜನಜಾಗೃತಿ ಸಮಿತಿ, ಜಯಕರ್ನಾಟಕ ಜನಪರ ವೇದಿಕೆ ಮತ್ತು ತಾಲೂಕು ವೀರಶೈವ ಅರ್ಚಕ ಪುರೋಹಿತ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು, ಈ ಸಂಧರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಈರೇಶ್, ಶರತ್, ಶ್ರೀನಿವಾಸ್, ಜಯ ಕರ್ನಾಟಕ ಜನಪರ ಸಂಘದ ಅಧ್ಯಕ್ಷರಾದ ಹುಲುಗಿ ಕೃಷ್ಣ, ಪುರೋಹಿತ ಸಂಘದ ಶಿವಕುಮಾರ್, ನಂದೀಶ್ ಶಾಸ್ತ್ರಿ, ಕೊಟ್ರೇಶ್ ಶಾಸ್ತ್ರಿ, ಪರಮೇಶ್ವರಯ್ಯ ಶಾಸ್ತ್ರಿ, ಪ್ರಸಾದ್ ಶಾಸ್ತ್ರಿ, ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷರಾದ ಪ್ರಕಾಶ್ ಎಸ್. ಎಂ. ಮಂಜುನಾಥ್ ಬಿ.ವಿ. ಜೈನ ಸಮಾಜದ ಅಶೋಕ್ ಕುಮಾರ್, ಚಂದ್ರಜಿತ್, ದೇವೇಂದ್ರ, ಆನಂದ್, ರಾಜಣ್ಣ, ಧರ್ಮೇಂದ್ರ ಮತ್ತಿತರರು ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!