ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಜಾತಿನಿಂದನೆ ಕೇಸು ದಾಖಲು..!

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಜಾತಿನಿಂದನೆ ಕೇಸು ದಾಖಲು..!

ಶಿವಮೊಗ್ಗ ಖಾಸಗಿ ಕಾಲೇಜು ಪ್ರಾಂಶುಪಾಲ ಹಾಗೂ ಪ್ರಮುಖ ಚರ್ಚ್ ಒಂದರ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲೇಜು ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲು ಮಾಡಲಾಗಿದೆ‌ ಜೊತೆಗೆ ವಿದ್ಯಾರ್ಥಿನಿಗೆ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ‌ ಬಂದಿದೆ.

ಶಿವಮೊಗ್ಗದ ಪ್ರತಿಷ್ಠಿತ ಚರ್ಚ್ ನ ಫಾದರ್ ಹಾಗೂ ಈ ಚರ್ಚ್ ನ ಅಧೀನದಲ್ಲಿರುವ ಕಾಲೇಜಿನ ಪ್ರಾಚಾರ್ಯ
ಫಾದರ್ ಫ್ರಾನ್ಸಿಸ್ ಫರ್ನಾಂಡಿಸ್ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಜಾತಿ ನಿಂದನೆ ಅಡಿ ದೂರು ನೀಡಲಾಗಿದೆ.

ಈ ಸಂಬಂಧ ಫಾದರ್ ಫ್ರಾನ್ಸಿಸ್ ಫರ್ನಾಂಡಿಸ್ ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ‌.

Admin

Leave a Reply

Your email address will not be published. Required fields are marked *

error: Content is protected !!