ಎಸ್.ಪಿ ನಾಗರಾಜ್ ಗೌಡ, ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ..!

ಎಸ್.ಪಿ ನಾಗರಾಜ್ ಗೌಡ, ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ..!

ಶಿಕಾರಿಪುರ ತಾಲೂಕಿನ ಬಂಡಾಯ ಕಾಂಗ್ರೆಸ್ ‌ಅಭ್ಯರ್ಥಿಯಾಗಿ‌ ಸ್ಪರ್ಧಿಸಿದ ಎಸ್ ಪಿ ನಾಗರಾಜ ಗೌಡ ಮತ್ತು ಮಾಜಿ ಸಂಸದ ಆಯನೂರು ಮಂಜುನಾಥ
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಹಲವು ಮುಖಂಡರೊಂದಿಗೆ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹಮದ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪಿ.ಎನ್. ಚಂದ್ರಪ್ಪ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್ ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕರಾದ ಆರ್.ಎಂ ಮಂಜುನಾಥ್ ಗೌಡ್ರು, ಪಕ್ಷದ ರಾಜ್ಯ ಜಿಲ್ಲಾ ನಾಯಕರು ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!