ಚಕ್ರವರ್ತಿ ಸೂಲಿಬೆಲೆಗೆ ಪೊಲೀಸ್ ನೋಟಿಸ್ ಕಾರ್ಯಕರ್ತರ ಪ್ರತಿಭಟನೆ..!

ಚಕ್ರವರ್ತಿ ಸೂಲಿಬೆಲೆಗೆ ಪೊಲೀಸ್ ನೋಟಿಸ್ ಕಾರ್ಯಕರ್ತರ ಪ್ರತಿಭಟನೆ..!


ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ಒಂದು ದಾಖಲಾಗಿದ್ದು ಇದರ ಸಂಬಂಧ ಪೊಲೀಸ್ ನೋಟಿಸ್ ನೀಡಲಾಗಿದೆ ಈ ವಿಷಯಕ್ಕೆ ಠಾಣೆಗೆ ಚಕ್ರವರ್ತಿ ಸೂಲಿಬೆಲೆ ಹಾಜರಾಗಿದ್ದು ಕಾರ್ಯಕರ್ತರು ಠಾಣೆ ಎದುರು ಪ್ರತಿಭಟನೆಯನ್ನು ನಡೆಸಿದ್ದಾರೆ.

ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ರಾಜ್ಯ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೌಗಂಧಿಕಾ ರಘುನಾಥ್ ಅವರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ಅವರಿಗೆ ವಿನೋಬನಗರ ಠಾಣೆ ಪೊಲೀಸರು ನೋಟಿಸ್ ನೀಡಿದ್ದರು ಈ ಸಂಬಂಧ ಚಕ್ರವರ್ತಿ ಸೂಲಿಬೆಲೆ ಅವರು ಠಾಣೆಗೆ ಹಾಜರಾಗಿದ್ದು ಈ ವೇಳೆ ಚಕ್ರವರ್ತಿ ಸೂಲಿಬೆಲೆ ಅವರ ನೂರಾರು ಬೆಂಬಲಿಗರು ಠಾಣೆ ಎದುರು ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುವ ಮೂಲಕ ಪ್ರತಿಭಟನೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಹಾಗೂ ಬಿಜೆಪಿ ಮುಖಂಡರುಗಳು ಯುವ ಬ್ರಿಗೇಡ್ ಕಾರ್ಯಕರ್ತರು ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!