ವಿದ್ಯಾರ್ಥಿ ವೇತನ ನೀಡುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ಶಿಕಾರಿಪುರ ಪಟ್ಟಣದ ತಾಲೂಕು ಕಚೇರಿ ಎದುರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಜೀವನ ಜೊತೆ ಚೆಲ್ಲಾಟವನ್ನು ಆಡುತ್ತಿದೆ ಎಸ್ಸಿ ಎಸ್ಟಿ ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ವಂಚಿಸುತ್ತಿದೆ ಎಂದು ವಿಭಾಗ ಸಂಚಾಲಕ ಪ್ರದೀಪ್ ಆಕ್ರೋಷ ವ್ಯಕ್ತಪಡಿಸಿದರು.
ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ನೀಡಬೇಕಾದ ವೇತನವನ್ನು ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ರಾಜ್ಯಾದಂತ್ಯ ಹೋರಟ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಾರ್ಯಕರ್ತರಾದ ಪ್ರವೀಣ್, ಗಿರೀಶ್, ರಂಗನಾಥ್ ,ಹೇಮಂತ್ ,ಸುಹಾಸ್ , ಬಸವರಾಜ್, ಗಣೇಶ, ಕಾರ್ತಿಕ್ , ಸೀಮಾ, ಪವಿತ್ರ, ರಕ್ಷಿತ, ಚಂದನ, ಅಂಜಿತಾ, ಪ್ರದೀಪ್ ಇದ್ದರು.
News by: Raghu Shikari-7411515737