ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ..!

ಶಿಕಾರಿಪುರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು.

ತಾಲೂಕಿನ ಮದಗಹಾರನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಓರಿ ಬೆದರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಪೊಲೀಸರು ಹೋರಿ ಹಬ್ಬವನ್ನು ತಡೆದಿದ್ದಾರೆ ಎಂದು ಆರೋಪಿಸಿ ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಮದಗ ಹಾರನಹಳ್ಳಿ ಗ್ರಾಮಸ್ಥರ ಪೊಲೀಸ್ ಠಾಣೆ ಎದುರು ಪ್ರತಿಭಟನೆಯನ್ನು ನಡೆಸಿದರು.

ಹೋರಿ ಹಬ್ಬ ಗ್ರಾಮೀಣಾ ರೈತರು ಸಂಭ್ರಮದಿಂದ ಆಚರಿಸುವ ಹಬ್ಬವಾಗಿದ್ದು ರೈತರಿಗೆ ಅಧಿಕಾರಿಗಳು ತೊಂದರೆ ನೀಡದೆ ಹಬ್ಬವನ್ನು ಆಚರಿಸಲು ಮುಕ್ತ ಅವಕಾಶ ನೀಡಬೇಕು ಎಂದರು.

ಈ ವೇಳೆ ಎಂಐಡಿಬಿ ಮಾಜಿ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ, ತಾ.ಬಿಜೆಪಿ ಅಧ್ಯಕ್ಷ ವಿರೇಂದ್ರ ಪಾಟೀಲ್, ಯುವ ಮೋರ್ಚಾದ ಶಿವರಾಜ್ ಪಾಟೀಲ್, ಮಾಜಿ ರಾಘವೇಂದ್ರ, ಪ್ರವೀಣ್ ಬೆಣ್ಣೆ ,ರುದ್ರೇಶ್ ,ಶಂಭು ಸೇರಿದಂತೆ ಕಾರ್ಯಕರ್ತರು ಇದ್ದರು.
News by: Raghu Shikari-7411515737