ಶಿಕಾರಿಪುರ ಶಾಲೆಯೊಂದರಲ್ಲಿ ಲೈಂಗಿಕ ಕಿರುಕುಳ ಇಬ್ಬರು ಶಿಕ್ಷಕರು ಅಮಾನತು

ಶಿಕಾರಿಪುರ ಶಾಲೆಯೊಂದರಲ್ಲಿ ಲೈಂಗಿಕ ಕಿರುಕುಳ ಇಬ್ಬರು ಶಿಕ್ಷಕರು ಅಮಾನತು

ಶಿಕಾರಿಪುರ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ‌ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ.

ಶಿಕಾರಿಪುರ ಪಟ್ಟಣದ ಶಾಲೆಯೊಂದರಲ್ಲಿ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ.

ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ‌ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆಪಾದನೆಯಿಂದಾಗಿ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿತ್ತು. ಈ ನಡುವೆ ಬಂದ ಆರೋಪಗಳ ಅಧಾರದ ಮೇಲೆ ಬಿಇಒ‌ ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಡಿಡಿಪಿಐ ಅವರಿಗೆ ವರದಿ‌ ನೀಡಿದ್ದಾರೆ.‌ ಇದರ ಆಧಾರದ ಮೇಲೆ‌ ಕ್ರಮಕೈಗೊಳ್ಳಲಾಗಿದೆ ಈ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!