ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಾವಣೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಾವಣೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

ರಾಜ್ಯ ಸರ್ಕಾರ ಕುವೆಂಪು ಅವರಿಗೆ ಅಪಮಾನ‌ ಮಾಡಿದೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ತಾಲೂಕ್ ಕಛೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಶಿಕಾರಿಪುರ ತಾಲೂಕು ಬಿಜೆಪಿ ಯುವ ಮೋರ್ಚಾದ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಘೋಷ ವಾಕ್ಯವನ್ನು ಬದಲಾಯಿಸಿ ರಾಜ್ಯ ಸರ್ಕಾರ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂದು ಬದಲಾಯಿಸಿದ್ದು ಇದನ್ನು ವಿರೋಧಿಸಿ‌ ವಿಶ್ವಮಾನವ ರಾಷ್ಟ್ರಕವಿ ಕುವೆಂಪುರವರ ಸಾಲುಗಳನ್ನು ಯಥವತ್ತಾಗಿ ಉಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಈ ವೇಳಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ವಿರಣ್ಣಗೌಡ ಜಿಬಿ,ಪ್ರಧಾನ ಕಾರ್ಯದರ್ಶಿ ಲೋಹಿತ್, ನಿರಂಜನ್, ಮುಖಂಡರಾದ ಸಿದ್ದಲಿಂಗಪ್ಪ, ಗಿರೀಶ್ ಧಾರವಾಡ, ಧ್ರುವ, ವಿರೇಶ್,ವಿನಯ್, ರವಿಕಾಂತ್,ರಾಜು,‌ಶ್ರೀನಿವಾಸ್, ಸೇರಿದಂತೆ ಮತ್ತಿತರರು ಇದ್ದರು.

Admin

Leave a Reply

Your email address will not be published. Required fields are marked *

error: Content is protected !!