ಶಿವಮೊಗ್ಗದ ಮೂವರಿಗೆ ನಿಮಗ ಮಂಡಳಿ ಸ್ಥಾನ: ಆರ್ ಎಂಎಂಗೆ ಎಂಎಡಿಬಿ, ಸೂಡಗೆ ಸುಂದರೇಶ್,ಸಾಂಬಾರ ನಿಗಮಕ್ಕೆ ಪಲ್ಲವಿ…!
ಶಿವಮೊಗ್ಗ ಜಿಲ್ಲೆಯ ಮೂರು ಜನ ಕಾಂಗ್ರೆಸ್ ಮುಖಂಡರಿಗೆ ವಿವಿಧ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರಿಗೆ (ಸೂಡ) ಶಿವಮೊಗ್ಗ ಭದ್ರಾವತಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ತೀರ್ಥಹಳ್ಳಿಯ ಡಾ.ಆರ್ ಎಂ ಮಂಜುನಾಥ ಗೌಡ ಅವರಿಗೆ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿಲಾಗಿದ್ದು
ಕಾಂಗ್ರೆಸ್ ವಕ್ತಾರೆ ಜಿ.ಪಲ್ಲವಿ ಅವರನ್ನು ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಡಾ.ಅಂಶುಮಂತ್ ಅವರನ್ನು ಭದ್ರಾ ಕಾಡಾ ಅಧ್ಯಕ್ಷರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.