ಲೋಕಸಭಾ ಚುನಾವಣೆ ಮುಹೂರ್ತ ಫಿಕ್ಸ್: ಕರ್ನಾಟಕದಲ್ಲಿ ಯಾವಗಾ..?

ಲೋಕಸಭಾ ಚುನಾವಣೆ ಮುಹೂರ್ತ ಫಿಕ್ಸ್: ಕರ್ನಾಟಕದಲ್ಲಿ ಯಾವಗಾ..?

2024ರ ಲೋಕಸಭೆ ಚುನಾವಣೆಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಭಾರತೀಯ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್‌ ಕುಮಾ‌ರ್ ಅವರು ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

ದೇಶದಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದ್ದು ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಪ್ರಾರಂಭವಾಗುತ್ತದೆ ಮತ್ತು ಜೂನ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ರಾಜ್ಯದಲ್ಲಿ ಚುನಾವಣೆ ಮತದಾನವು ಎರಡು ಹಂತಗಳಲ್ಲಿ ನಡೆಯಲಿದ್ದು, ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಏ. 26ರಂದು ಮತದಾನ ನಡೆಯುವ ಕ್ಷೇತ್ರಗಳು:

ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ.

ಮೇ 7ರಂದು ಮತದಾನ ನಡೆಯುವ ಕ್ಷೇತ್ರಗಳು:

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದ‌ರ್ ಕೊಪ್ಪಳ ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ. ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.

Admin

Leave a Reply

Your email address will not be published. Required fields are marked *

error: Content is protected !!