ಶಿಕಾರಿಪುರದ ತೋಗರ್ಸಿ ಬಳಿ ಕಾರಿಗೆ ಬೆಂಕಿ ಹಚ್ಚಿ ಯುವಕನ ಭೀಕರ ಹತ್ಯೆ

ಶಿಕಾರಿಪುರದ ತೋಗರ್ಸಿ ಬಳಿ ಕಾರಿಗೆ ಬೆಂಕಿ ಹಚ್ಚಿ ಯುವಕನ ಭೀಕರ ಹತ್ಯೆ

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೊರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.

ತೋಗರ್ಸಿ ಗ್ರಾಮದ ಹೊರವಲಯದ ಸ್ಮಶಾನದ ಬಳಿ ಘಟನೆ ನಡೆದಿದ್ದು, ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ ವೀರೇಶ್ (27) ಎಂಬ ಯುವಕ ಭೀಕರವಾಗಿ ಹತ್ಯೆಗೀಡಾದ ಯುವಕ ಎಂದು ಹೇಳಲಾಗಿದೆ.  ಆತ ಬಂದಿದ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 

ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹವು ಸಂಪೂರ್ಣ ಸುಟ್ಟು ಕರಕಲಾಗಿದೆ ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್‌ಪಿ ಕೇಶವ್, ಇನ್ಸ್’ಪೆಕ್ಟರ್ ರುದ್ರೇಶ್, ಶಿರಾಳಕೊಪ್ಪ ಠಾಣೆ ಸಬ್ ಇನ್ಸ್’ಪೆಕ್ಟರ್ ರಮೇಶ್ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

Admin

Leave a Reply

Your email address will not be published. Required fields are marked *

error: Content is protected !!