ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು‌ ಹೋಗಿದ್ದ ಮೂವರು ವಿದ್ಯಾರ್ಥಿಗಳು ಸಾವು..!

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು‌ ಹೋಗಿದ್ದ ಮೂವರು ವಿದ್ಯಾರ್ಥಿಗಳು ಸಾವು..!

ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿ ನೀರಿನಲ್ಲಿ ಮುಳುಗಿದ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ಸಂಭವಿಸಿದೆ.

ಮೂವರು ಬಾಲಕರ ಶವ ಪತ್ತೆಯಾಗಿದೆ ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಹುಡುಕಾಟ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ.

ರಫನ್, ಇಯನ್, ಸಮ್ಮರ್ (16 ವರ್ಷ ) ಎಂಬ ಬಾಲಕರು ಈಜಲು ಹೋದಾಗ ಈ ಘಟನೆ ಜರುಗಿದೆ.‌‌ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಬಾಲಕರು ರಂಜಾನ್ ಉಪವಾಸ ಮುಗಿಸಿ ಸ್ನಾನಕ್ಕೆ ಈಜಲು ಹೋಗಿ ನಾಪತ್ತೆಯಾಗಿದ್ದರು. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Admin

Leave a Reply

Your email address will not be published. Required fields are marked *

error: Content is protected !!