ಶಿವಮೊಗ್ಗದಲ್ಲಿ ಏ.12 ರಿಂದ ಪ್ರದೇಶದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ

ಶಿವಮೊಗ್ಗದಲ್ಲಿ ಏ.12 ರಿಂದ ಪ್ರದೇಶದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಲೋಕಸಭಾ ಚುನಾವಣಾ ಪ್ರಕ್ರಿಯೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಏಪ್ರಿಲ್ 12ರಿಂದ 22ರವರೆಗೂ ಜಿಲ್ಲಾಧಿಕಾರಿಗಳ ಕಚೇರಿ ಆವರಣರದ 100 ಮೀಟರ್ ವ್ಯಾಪ್ತಿಯ ಸುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಕುರಿತಂತೆ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ ಏಪ್ರಿಲ್ 12ರಂದು ಅಧಿಸೂಚನೆ ಹೊರಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 12ರ ಬೆಳಗ್ಗೆ 6 ಗಂಟೆಯಿಂದ 22ರ ಸಂಜೆ 6 ಗಂಟೆಯವರೆಗೂ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ 100 ಮೀಟರ್ ಸುತ್ತಲೂ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!