ರಾಜ್ಯಾದ್ಯಂತ ರಣಬಿಸಿಲು ಹಿನ್ನಲೆ| ಎ. 15ರಿಂದ ಅಂಗನವಾಡಿ ಕಾರ್ಯನಿರ್ವಹಣಾ ಸಮಯ ಬದಲಾವಣೆ

ರಾಜ್ಯಾದ್ಯಂತ ರಣಬಿಸಿಲು ಹಿನ್ನಲೆ| ಎ. 15ರಿಂದ ಅಂಗನವಾಡಿ ಕಾರ್ಯನಿರ್ವಹಣಾ ಸಮಯ ಬದಲಾವಣೆ


** ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ.


ಬೇಸಿಗೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಂಗನವಾಡಿ ಕೇಂದ್ರಗಳ ಕಾರ್ಯ ನಿರ್ವಹಣಾ ಸಮಯವನ್ನು ಈ ಮೊದಲು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೂ ನಿಗದಿಪಡಿಸಲಾಗಿತ್ತು. ಬಿಸಿಲು ಹೆಚ್ಚಾಗಿರುವುದರಿಂದ ಉಳಿದ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂಬ ಮನವಿ ಹಿನ್ನೆಲೆಯಲ್ಲಿ ಏ.15 ರಿಂದ ಮೇ 10 ರವರೆಗೂ ರಾಜ್ಯಾದ್ಯಂತ ವಿಸ್ತರಿಸಲಾಗಿದೆ.


ಅಂಗನವಾಡಿ ಸಿಬ್ಬಂದಿಗೆ ಮೇ 11 ರಿಂದ 26 ವರೆಗೂ ಬೇಸಿಗೆ ರಜೆ ನೀಡಲಾಗಿದೆ. ಮೇ 27 ರಿಂದ ಅಂಗನವಾಡಿಗಳು ಎಂದಿನಂತೆ ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೂ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

Admin

Leave a Reply

Your email address will not be published. Required fields are marked *

error: Content is protected !!