ಕೇಂದ್ರಿಯ ಸೈನಿಕ ಮಂಡಳಿಯಿಂದ ಆರ್ಥಿಕ ನೆರವಿಗಾಗಿ ಅರ್ಜಿ ಆಹ್ವಾನ

ಕೇಂದ್ರಿಯ ಸೈನಿಕ ಮಂಡಳಿಯಿಂದ ಆರ್ಥಿಕ ನೆರವಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ ಕೇಂದ್ರೀಯ ಸೈನಿಕ ಮಂಡಳಿಯು ಒಂದನೇಯ ತರಗತಿಯಿಂದ ವೃತ್ತಿಪರ ಶಿಕ್ಷಣವಲ್ಲದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಹವಾಲ್ದಾರ್ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳಿಗೆ ಆರ್ಥಿಕ ನೆರವನ್ನು ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಜಾಲ ತಾಣ ದಲ್ಲಿ ಎ. 30 ರೊಳಗಾಗಿ ಅರ್ಜಿ ಸಲ್ಲಿಸಿ, ಅರ್ಜಿ ಪ್ರತಿ ಹಾಗೂ ಸಂಬಂಧಿತ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಅನುಮೋದನೆ ಪಡೆದುಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿ, ದೂ.ಸಂ.: 08182-220925 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!