ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ! ಹೀಗೆ ಅರ್ಜಿ ಹಾಕಿ

ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ! ಹೀಗೆ ಅರ್ಜಿ ಹಾಕಿ


ಕರ್ನಾಟಕ ಹೈಕೋರ್ಟ್​​ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 8 ಲಾ ಕ್ಲರ್ಕ್​ & ರಿಸರ್ಚ್​ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಹಾಕುವ ಡೈರೆಕ್ಟ್​ ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ವಿದ್ಯಾರ್ಹತೆ:
ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನಿನಲ್ಲಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 17, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 25,000
ಉದ್ಯೋಗದ ಸ್ಥಳ:
ಬೆಂಗಳೂರು


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಕಾಡೆಮಿಕ್ ರೆಕಾರ್ಡ್​
ಸಾಧನೆಗಳು
ಸಂದರ್ಶನ
https://recruitmenthck.kar.nic.in/hck/lra/home.phpapply here

Admin

Leave a Reply

Your email address will not be published. Required fields are marked *

error: Content is protected !!