ಜಿಲ್ಲೆಯಾದ್ಯಂತ ಭಾರೀ ಮಳೆಯ ಅವಾಂತರ, ಎಲ್ಲೇಲ್ಲಿ ಏನಾಗಿದೆ..?

ಜಿಲ್ಲೆಯಾದ್ಯಂತ ಭಾರೀ ಮಳೆಯ ಅವಾಂತರ, ಎಲ್ಲೇಲ್ಲಿ ಏನಾಗಿದೆ..?

ಶಿವಮೊಗ್ಗ: ಜಿಲ್ಲೆಯಾದ್ಯಂತ ಗುರುವಾರ ಸಂಜೆಯಿಂದ ಆರಂಬವಾದ ಗುಡುಗು, ಗಾಳಿ ಸಹಿತ ಸುರಿದ ಭಾರೀ ಮಳೆ ತಂಪನೆರೆದಿದ್ದರೂ, ಬಹಳಷ್ಟು ಅನಾಹುತ ಸೃಷ್ಠಿಸುವ ಜೊತೆಯಲ್ಲಿ ವ್ಯಕ್ತಿಯೊಬ್ಬರನ್ನು ಬಲಿ ಪಡೆದಿದೆ.

ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ ಸೇರಿ ಹಲವು ತಾಲೂಕುಗಳಲ್ಲಿ ಭಾರೀ ಮಳೆಯಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದ್ದರೆ, ಭದ್ರಾವತಿಯಲ್ಲಿ ಗುಡುಗು, ಗಾಳಿ ಸಹಿತ ಸಂಜೆ ಭಾರೀ ಮಳೆ ಸುರಿದಿದೆ.

ಇನ್ನು, ಸಾಗರ ಪಟ್ಟಣ ಸೇರಿ ತಾಲೂಕಿನಾದ್ಯಂತ ಜೋರು ಮಳೆಯಾಗಿದ್ದು, ಕೆಲವು ಗ್ರಾಮಗಳಲ್ಲಿ ಮರಗಳು ಧರೆಗುರುಳಿವೆ.

ಶಿಕಾರಿಪುರ, ಹೊಸನಗರ,ಸೊರಬ,
ಆಯನೂರು, ಕುಂಸಿ ಪ್ರದೇಶಗಳಲ್ಲೂ ಸಹ ಉತ್ತಮ ಮಳೆಯಾಗಿದ್ದು, ವರುಣನ ಅಬ್ಬರಕ್ಕೆ ಹಲವು ಮರಗಳು ಧರೆಗೆ ಉರುಳಿದ್ದು, ವಿದ್ಯುತ್ ತಂತಿ ಸಹ ತುಂಡಾಗಿ ಬಿದ್ದಿದೆ. ಪರಿಣಾಮವಾಗಿ ಹಲವು ಕಡೆ ವಿದ್ಯುತ್ ವ್ಯತ್ಯಯವುಂಟಾಗಿತ್ತು.

ಆಗುಂಬೆ ಘಾಟಿಯ 3ನೇ ತಿರುವಿನಲ್ಲಿ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!