ಲಿಂಗತ್ವ ಅಲ್ಪಸಂಖ್ಯಾತರು ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಿ :ಸ್ನೇಹಲ್ ಸುಧಾಕರ್ ಲೋಖಂಡೆ

ಲಿಂಗತ್ವ ಅಲ್ಪಸಂಖ್ಯಾತರು ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಿ :ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ :ಲಿಂಗತ್ವ ಅಲ್ಪಸಂಖ್ಯಾತರು ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಕರೆ ನೀಡಿದರು.
ನಗರದ ಡಿಎಆರ್ ಸಭಾಂಗಣದಲ್ಲಿ ನಡೆದ ಸ್ವೀಪ್ ಸಮಿತಿಯ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ರಕ್ಷ ಸಮುದಾಯ ಸಂಘ, ಅಭಯಧಾಮ, ಸಂಸ್ಥೆ, ಇವರ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ದಮನಿತ ಮಹಿಳೆಯರಿಗೆ ಡಿಎಆರ್ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಸ್ವೀಪ್ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನವನ್ನು ಮಾಡಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಲಾಸಲಾಗುತ್ತಿದ್ದು ಸಮಾಜದ ದಮನಿತರು ಮುಖ್ಯವಾಹಿನಿಗೆ ಬರಬೇಕು.

ಲಿಂಗತ್ವ ಅಲ್ಪಸಂಖ್ಯಾತರು ಕೂಡ ಸಮಾಜದ ಒಂದು ಭಾಗ. ಲಿಂಗತ್ವ ಅಲ್ಪಸಂಖ್ಯಾತರು ಮತದಾರ ನೋಂದಣಿಯಲ್ಲಿ ಹಿಂದೆ ಉಳಿಯಬಾರದು. ಪ್ರತಿಯೊಬ್ಬರು ನೋಂದಣಿ ಮಾಡಿಕೊಳ್ಳಬೇಕು. ಸಮಾಜದಲ್ಲಿ ಪುರಷ, ಮಹಿಳೆಯರ ಜೊತೆಯಲ್ಲಿ ತೃತೀಯ ಲಿಂಗಿಗಳು ಅಭಿವೃದ್ಧಿಯಾಗಬೇಕು. ನಿಮ್ಮ ದ್ವನಿಯೂ ಕೂಡ ಸಂಸತ್ತಿನಲ್ಲಿ ಕೇಳಿಸಬೇಕು. ಅದಕ್ಕಾಗಿ ಎಲ್ಲ ಲಿಂಗತ್ವ ಅಲ್ಪಸಂಖ್ಯಾತರು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಮಾತನಾಡಿ, ಸಂವಿಧಾನ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಆದರೆ ನಾವು ನಮ್ಮ ಮೂಲಭೂತ ಕರ್ತವ್ಯಗಳನ್ನು ಮರೆಯಬಾರದು. ಮತದಾನ ನಮ್ಮ ಮೂಲಭೂತ ಕರ್ತವ್ಯವಾಗಿದೆ ಎಂದು ಭಾವಿಸಿ ಮತದಾನದಲ್ಲಿ ಭಾಗವಹಿಸಬೇಕು ಎಂದ ಅವರು ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಪಯಣ ಸಂಸ್ಥೆಯ ನಿರ್ದೇಶಕಿ ಚಾಂದಿನಿ ಮಾತನಾಡಿ, ತೃತೀಯ ಲಿಂಗ ಜನಾಂಗದವರು ಎಂದು ನಾವು ಮೊದಲು ಒಪ್ಪಿಕೊಳ್ಳಬೇಕು. ಸಮಾಜ ಕೂಡ ನಮ್ಮನ್ನು ಗೌರವಿಸಬೇಕು. ಮತದಾರರ ನೋಂದಣಿಯಲ್ಲಿ ತಮ್ಮ ಲಿಂಗ ನಮೂದಿಸಿಕೊಳ್ಳಲು ಹಿಂದೆ ಸರಿಯುತ್ತಿದ್ದು ಪುರಷ ಅಥವಾ ಮಹಿಳೆ ಎಂದು ಸೇರಿಕೊಳ್ಳುತ್ತಾರೆ. ತೃತೀಯ ಲಿಂಗ ಎಂದು ನಮೂದಿಸಲು ಯಾರೂ ಒಪ್ಪುವುದಿಲ್ಲ ಎಂದ ಅವರು ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸ್ವೀಪ್ ಕಾರ್ಯಕ್ರಮದ ಕುರಿತು ರಾಜ್ಯಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೀಜ್ ಅವರು ಉಪನ್ಯಾಸ ಮತದಾನದ ಕುರಿತು ಜಾಗೃತಿ ಮೂಡಿಸಿದರು. ನಂತರ ವಿವಿಧ ಕ್ರೀಡಾ ಚಟುವಟಿಗಳು, ಮತದಾನ ಜಾಗೃತಿ ಗೀತೆ ಹಾಗೂ ಅರಿವು ಮೂಡಿಸುವ ಕಾರ್ಯಾಗಾರವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಬಿ.ಕೃಷ್ಣಪ್ಪ, ಜಿಲ್ಲಾ ರಕ್ಷ ಸಮಿತಿ ಅಧ್ಯಕ್ಷರಾದ ಮೊಹಮ್ಮದ್ ಸೈಯದ್, ಅಭಯಧಾಮ ಸಂಸ್ಥೆಯ ಜಯಲಕ್ಷ್ಮಿ, ಸೇರಿದಂತೆ ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲಾ ಸ್ವೀಪ್ ಸಮಿತಿಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

Admin

Leave a Reply

Your email address will not be published. Required fields are marked *

error: Content is protected !!