ಹುಬ್ಬಳ್ಳಿ : ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಕೊಲೆ:ಪ್ರಮೋದ್ ಮುತಾಲಿಕ್…
ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳು ಪ್ರೀತಿಯನ್ನು ನಿರಾಕರಿಸಿದಳೆಂದು ಹತ್ಯೆ ಮಾಡಿರುವ ಪ್ರಕರಣವನ್ನು ಖಂಡಿಸಿ, ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ.
ಆರೋಪಿ ಫಯಾಜ್ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಆರೋಪಿ ಫಯಾಜ್ ಚಾಕು ಹಾಕಲು ಎಲ್ಲಿ ತರಬೇತಿ ಪಡೆದಿದ್ದಾನೆ? ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಬೆಳೆಸಿದ ವಿಷಬೀಜವಿದು. ಕಾಂಗ್ರೆಸ್ ಹುಟ್ಟಿದಾಗ ಆ ಪಕ್ಷದ ನಾಯಕರು ಬ್ರಿಟಿಷರ ಪರವಿದ್ದರು. ಈಗ ಮುಸ್ಲಿಮರು, ಕೊಲೆಗಡುಕರ ಪರ ಇದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿ ಕಳಕಳಿ ಇದ್ದರೆ ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು. ಕೊಲೆಗಡುಕನ ಮನೆಗೆ ಬುಲ್ಡೋಜರ್ ಹಚ್ಚಿಸಿ ಕಿತ್ತು ಬಿಸಾಕಬೇಕು. ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಿ ಅವರ ಮನೆಯನ್ನು ಬಹಿಷ್ಕರಿಸಬೇಕು.
ವಕೀಲರು ಅವನ ಪರ ವಾದ ಮಾಡಲು ನಿಲ್ಲಬಾರದು. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತೆದೆಯೋ ಅಲ್ಲಿಯವರೆಗೆ ಈ ರೀತಿ ಕೊಲೆಗಳು ಆಗುತ್ತಲೇ ಇರುತ್ತವೆ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದರು.