ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಉದ್ಯೋಗಿಗಳು ಬೇಕಾಗಿದ್ದಾರೆ! ಈಗಲೇ ಅಪ್ಲೈ ಮಾಡಿ..

ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಉದ್ಯೋಗಿಗಳು ಬೇಕಾಗಿದ್ದಾರೆ! ಈಗಲೇ ಅಪ್ಲೈ ಮಾಡಿ..


ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕನ್ಸಲ್ಟೆಂಟ್​ (ಕಂಪನಿ ಸೆಕ್ರೆಟರಿ) ಹುದ್ದೆ ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ವಿದ್ಯಾರ್ಹತೆ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ವಾಲಿಫೈಡ್​ ಕಂಪನಿ ಸೆಕ್ರೆಟರಿ (ACS) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 31, 2024ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 1,20,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ಜನರಲ್ ಮ್ಯಾನೇಜರ್ (HR)
ಕಿಯೋಸ್ಕ್ ಲಿಮಿಟೆಡ್
2 ನೇ ಬ್ಲಾಕ್
ಕೋರಮಂಗಲ
ಬೆಂಗಳೂರು-560034
ಕರ್ನಾಟಕ

Admin

Leave a Reply

Your email address will not be published. Required fields are marked *

error: Content is protected !!