ಲೋಕಸಭಾ ಚುನಾವಣೆ 2024: ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, 2.88 ಕೋಟಿ ಮತದಾರರು ಅರ್ಹರು!

ಲೋಕಸಭಾ ಚುನಾವಣೆ 2024: ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, 2.88 ಕೋಟಿ ಮತದಾರರು ಅರ್ಹರು!

ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ (ಏ.26) ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಸಂಪೂರ್ಣ ಸಿದ್ಧತೆಯಾಗಿದೆ.

ಈ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಸುಮಾರು 1.40 ಲಕ್ಷ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 2,88,19,342 ಕೋಟಿ ಮತದಾರರು ಹಕ್ಕು ಚಲಾವಣೆಗೆ ಅರ್ಹರಾಗಿದ್ದಾರೆ.

ಚುನಾವಣಾ ಸಿದ್ಧತೆ ಕುರಿತು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್‌ ಮೀನಾ ಅವರು, ಮೊದಲ ಹಂತದಲ್ಲಿ ಚುನಾವಣಾ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಮತದಾನ ಮುಕ್ತಾಯವಾಗುವ 48 ತಾಸಿಗೂ ಮುನ್ನ ಶೂನ್ಯ ಅವಧಿ ಘೋಷಿಸಲಾಗಿದೆ.

ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು, ಪಕ್ಷದ ಮುಖಂಡರು ಮನೆ ಮನೆಗೆ ತೆರಳಿ ಪ್ರಚಾರ ಮಾಡಬಹುದು. ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬುಧವಾರ ಸಂಜೆಯಿಂದಲೇ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

Admin

Leave a Reply

Your email address will not be published. Required fields are marked *

error: Content is protected !!