IIMB ಬೆಂಗಳೂರಿನಲ್ಲಿ ಉದ್ಯೋಗವಿದೆ, ತಿಂಗಳಿಗೆ 44,000 ಸಂಬಳ!

IIMB ಬೆಂಗಳೂರಿನಲ್ಲಿ ಉದ್ಯೋಗವಿದೆ, ತಿಂಗಳಿಗೆ 44,000 ಸಂಬಳ!


ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಕಾಡೆಮಿಕ್ ಅಸೋಸಿಯೇಟ್- ಡಿಸಿಶನ್ ಸೈನ್ಸಸ್ ಏರಿಯಾ​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 4, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು.


ವಿದ್ಯಾರ್ಹತೆ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ಟಾಟಿಸ್ಟಿಕ್ಸ್​ / ಆಪರೇಶನ್ ರಿಸರ್ಚ್​​ನಲ್ಲಿ ಸ್ನಾತಕೋತ್ತರ ಪದವಿ, ಎಂಬಿಎ, ಮ್ಯಾನೇಜ್​ಮೆಂಟ್​​ನಲ್ಲಿ ಪೋಸ್ಟ್​ ಗ್ರಾಜುಯೇಟ್ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 38,000-44,000
ಉದ್ಯೋಗದ ಸ್ಥಳ:
ಬೆಂಗಳೂರು


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.
https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1 apply here

Admin

Leave a Reply

Your email address will not be published. Required fields are marked *

error: Content is protected !!