ಮಂಡ್ಯದಲ್ಲಿ ಅತಿ ಹೆಚ್ಚು, ಬೆಂಗಳೂರು ಕೇಂದ್ರದಲ್ಲಿ ಅತಿ ಕಡಿಮೆ ಮತದಾನ..

ಮಂಡ್ಯದಲ್ಲಿ ಅತಿ ಹೆಚ್ಚು, ಬೆಂಗಳೂರು ಕೇಂದ್ರದಲ್ಲಿ ಅತಿ ಕಡಿಮೆ ಮತದಾನ..

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಮತದಾನದಲ್ಲಿ ಮಂಡ್ಯದಲ್ಲಿ ಅತಿ ಹೆಚ್ಚು ಮತದಾನವಾಗಿದ್ದರೆ, ಬೆಂಗಳೂರಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿದೆ.


ಸಂಜೆ 5 ಗಂಟೆಯವರೆಗೆ ಕೇಂದ್ರ ಚುನಾವಣಾ ಆಯೋಗ ನೀಡಿದ ಮಾಹಿತಿಯ ಪ್ರಕಾರ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮಾತ್ರ ಮತದಾನವಾಗಿದೆ.
14 ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ
ಉಡುಪಿ-ಚಿಕ್ಕಮಗಳೂರು – ಶೇ.72.13
ಹಾಸನ- ಶೇ.72.13
ದಕ್ಷಿಣ ಕನ್ನಡ- ಶೇ.71.83
ಚಿತ್ರದುರ್ಗ- ಶೇ.67
ತುಮಕೂರು – ಶೇ.72.10
ಮಂಡ್ಯ- ಶೇ.74.87
ಮೈಸೂರು- ಶೇ.65.85
ಚಾಮರಾಜನಗರ- ಶೇ.69.60
ಬೆಂಗಳೂರು ಗ್ರಾಮಾಂತರ – ಶೇ.61.78
ಬೆಂಗಳೂರು ಉತ್ತರ- ಶೇ.50.84
ಬೆಂಗಳೂರು ಕೇಂದ್ರ – ಶೇ.48.61
ಬೆಂಗಳೂರು ದಕ್ಷಿಣ- ಶೇ.49.37
ಚಿಕ್ಕಬಳ್ಳಾಪುರ – ಶೇ.70.97
ಕೋಲಾರ- ಶೇ.71.26

Admin

Leave a Reply

Your email address will not be published. Required fields are marked *

error: Content is protected !!