ಮಾಜಿ ಪ್ರಧಾನಿ ದೇವೆಗೌಡರ ನಿವಾಸದಲ್ಲಿ ಶಾಸಕ ಹೆಚ್.ಡಿ. ರೇವಣ್ಣ ಬಂಧನ..!

ಮಾಜಿ ಪ್ರಧಾನಿ ದೇವೆಗೌಡರ ನಿವಾಸದಲ್ಲಿ ಶಾಸಕ ಹೆಚ್.ಡಿ. ರೇವಣ್ಣ ಬಂಧನ..!

ಬೆಂಗಳೂರು: ಲೈಂಗಿಕ ಪ್ರಕರಣ ಮತ್ತು ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್​ಡಿ ರೇವಣ್ಣವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಬಂಧಿಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಐಡಿ ಕಚೇರಿಗೆ ಕರೆತಂದಿದ್ದಾರೆ. ಇವತ್ತು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಕೆ.ಆರ್ ನಗರ ಠಾಣೆಯಲ್ಲಿ‌ ದಾಖಲಾಗಿರುವ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನ ನಡೆದಿದೆ.

ಮೈಸೂರಿನ ಕೆಆರ್​ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಸಂಬಂಧ ಸಂತ್ರಸ್ತೆಯ ಪುತ್ರ ದೂರು ದಾಖಲಿಸಿದ್ದರು. ದೂರಿನ ಅನ್ವಯ ಎಫ್ಐಆರ್ ದಾಖಲಾಗಿತ್ತು. ಕೆಲ ಗಂಟೆಗಳ ಹಿಂದೆಯಷ್ಟೇ ರೇವಣ್ಣನ ಆಪ್ತನ ತೋಟದ ಮನೆಯಲ್ಲಿದ್ದ ಸಂತ್ರಸ್ತೆಯನ್ನು ರಕ್ಷಣೆ ಮಾಡಲಾಗಿದೆ.ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ.

ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿದ್ದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ.

Admin

Leave a Reply

Your email address will not be published. Required fields are marked *

error: Content is protected !!