SSLC ಗ್ರೇಸ್ ಮಾರ್ಕ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

SSLC ಗ್ರೇಸ್ ಮಾರ್ಕ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಧಾನಸೌಧದಲ್ಲಿ ನಡೆದ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡ ಅವರು, ಈ ವರ್ಷ ಗ್ರೇಸ್ ಮಾರ್ಕ್ ಕೊಟ್ಟ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ. ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. ಗ್ರೇಸ್ ಮಾರ್ಕ್ಸ್ ನೀಡಲು ನಿಮಗೆ ಯಾರು ಹೇಳಿದ್ದು ಎಂದು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳು ಅವರ ಅರ್ಹತೆ ಆಧಾರದಲ್ಲಿ ಪ್ರಗತಿ ಸಾಧಿಸಬೇಕು. ಗ್ರೇಸ್ ಮಾರ್ಕ್ಸ್ ನೀಡಿದರೆ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗಲ್ವಾ? ಕಡಿಮೆ ಅಂಕ ಪಡೆದರೆ ವಿದ್ಯಾರ್ಥಿಗಳು ಅನರ್ಹರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳನ್ನು ಪ್ರಶ್ನಿಸಿದರು. ಶಿವಕುಮಾರ್ ಮಾತಿಗೆ ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದರು.


ಮೇ 9ರಂದು ರಾಜ್ಯದಲ್ಲಿ 2023-24ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿತ್ತು.

Admin

Leave a Reply

Your email address will not be published. Required fields are marked *

error: Content is protected !!