ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು..

ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು..

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ. 03 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ.

ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಷ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಚುನಾವಣೆಯಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ.

ಹಾಗೂ ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್)ಯನ್ನು ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಎಪಿಕ್ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್ ಇತ್ಯಾದಿಗಳಲ್ಲಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Admin

Leave a Reply

Your email address will not be published. Required fields are marked *

error: Content is protected !!