ರಾಜ್ಯದ ಹಲವೆಡೆ ಭ್ರಷ್ಟರಿಗೆ ಶಾಕ್ ನೀಡಿದ ಲೋಕಾಯುಕ್ತ| ಬೆಳ್ಳಂಬೆಳಗ್ಗೆ‌ ಹಲವು ತಿಮಿಂಗಿಲಗಳಿಗೆ ಬಲೆ

ರಾಜ್ಯದ ಹಲವೆಡೆ ಭ್ರಷ್ಟರಿಗೆ ಶಾಕ್ ನೀಡಿದ ಲೋಕಾಯುಕ್ತ| ಬೆಳ್ಳಂಬೆಳಗ್ಗೆ‌ ಹಲವು ತಿಮಿಂಗಿಲಗಳಿಗೆ ಬಲೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಳಗ್ಗೆಯಷ್ಟೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದೀಗ ಅದರ ಬೆನ್ನಲ್ಲೇ ಕರ್ನಾಟಕದಾದ್ಯಂತ ಹಲವು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಇಳಿದಿದ್ದಾರೆ.


ಗುರುವಾರ ಬೆಳ್ಳಂಬೆಳಗ್ಗೆಯೇ 56 ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ​​11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಕೋಲಾರ ತಹಶೀಲ್ದಾರ್​ ವಿಜಿಣ್ಣ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ
ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್​ ಮನೆ ಮೇಲೆ ದಾಳಿ ನಡೆದಿದೆ. ದಾಳಿಯಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೈಸೂರಿನಲ್ಲಿ ನೀರಾವರಿ ಇಲಾಖೆಯ ಸೂಪರಿಡಿಂಡೆಂಟ್ ಇಂಜಿನಿಯರ್ ಮಹೇಶ್ ಕೆ. ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೈಸೂರಿನ ಜೆಸಿ ನಗರದಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜತೆಗೆ, ಗೋಕುಲಂ ಕಚೇರಿಯಲ್ಲಿಯೂ ಕಡತಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕಾರ್ಯಾಚರಣೆ ನಡೆದಿದೆ.


ಮಂಡ್ಯದಲ್ಲಿ ನಿವೃತ್ತ ಇಇ ಶಿವರಾಜ್ ಮತ್ತು ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆಯ 3 ಕಡೆ, ಮೈಸೂರಿನ 2 ಕಡೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಇಜ್ಜಲಘಟ್ಟದಲ್ಲಿರುವ ಶಿವರಾಜ್​ಗೆ ಸೇರಿದ ಫಾರ್ಮ್​ಹೌಸ್​, ಶಿವರಾಜ್​ ತಂದೆ ಮನೆ, ಜಲ್ಲಿ ಕ್ರಷರ್​​ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್​​​ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.


ಹಾಸನದಲ್ಲೂ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ ನಡೆಯುತ್ತಿದೆ. ಗ್ರೇಡ್​​​-1 ಕಾರ್ಯದರ್ಶಿ ಮನೆಗಳ ಮೇಲೆ ದಾಳಿ ನಡೆದಿದೆ. ಗ್ರೇಡ್​​​-1 ಕಾರ್ಯದರ್ಶಿ ಎನ್​.ಎಂ ಜಗದೀಶ್​ಗೆ ಸೇರಿದ ಹಾಸನದ ಮನೆ, ಬೆಂಗಳೂರಿನ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ಲೋಕಾಯುಕ್ತ ಡಿವೈಎಸ್​​ಪಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ.
ಚಿತ್ರದುರ್ಗದಲ್ಲಿ ನಿವೃತ್ತ ಇಂಜಿನಿಯರ್​​ ಎಂ ರವೀಂದ್ರಗೆ ಸೇರಿದ ಮನೆ, ಫಾರ್ಮ್​ಹೌಸ್​ ಮೇಲೆ ದಾಳಿ ನಡೆದಿದೆ. ಹಿರಿಯೂರು ತಾಲೂಕಿನ ಸೂಗೂರು ಫಾರ್ಮ್​ಹೌಸ್​​ ಮೇಲೆ ದಾಳಿ ನಡೆದಿದೆ. ಜತೆಗೆ, ಐಮಂಗಲ ಬಳಿ ಬಾಟಲಿ ಫ್ಯಾಕ್ಟರಿ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್​ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.

Admin

Leave a Reply

Your email address will not be published. Required fields are marked *

error: Content is protected !!