ವಿಐಎಸ್ಎಲ್-ಎಂಪಿಎಂ ಎರಡು ಕಣ್ಣುಗಳು ಇದ್ದಂತೆ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ಭದ್ರಾವತಿಯ ಎರಡು ಕಣ್ಣುಗಳಂತಿರುವ ಹಾಗೂ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಗಳಾಗಿರುವ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಸರ್ಕಾರದ ವತಿಯಿಂದಲೇ ಪುನಶ್ಚೇತನಗೊಳಿಸಲು ಸರ್ಕಾರದ ವತಿಯಿಂದಲೇ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ಪೂರ್ವದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಅವಳಿ ಸಂಸ್ಥೆಗಳನೆ ನಂಬಿಕೊಂಡು ಬದುಕು ಸಾಗಿಸುತ್ತಿದ್ದ ಸುಮಾರು 15 ಸಾವಿರ ಕುಟುಂಬಗಳು ಈ ಸಂಸ್ಥೆಯ ಉದ್ಯೋಗಾವಕಾಶ ಕಳೆದುಕೊಂಡು ಅತಂತ್ರ ಆಗಲಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.
ವಿಮಾನ ನಿಲ್ದಾಣದಲ್ಲಿ ಬಾಕಿ ಇರುವ ನೈಟ್ ಲ್ಯಾಂಡಿಂಗ್ ಸೇರಿ ಮತ್ತಿತರ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಿದೆ ನೈಟ್ ಲ್ಯಾಂಡಿಂಗ್ ಗೆ ಸಂಬಂಧಪಟ್ಟಂತೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದರು.
ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಶಾಲೆಗಳಲ್ಲಿನ ಕೊರತೆ ಇರುವ ಶಿಕ್ಷಕರ ಹುದ್ದೆಯನ್ನು ಶೀಘ್ರದಲ್ಲಿ ಭರ್ತಿ ಮಾಡಲು ಸರ್ಕಾರ ಉದ್ದೇಶಿಸಿದೆ. ಶಿಕ್ಷಣ ಇಲಾಖೆಯಲ್ಲಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ರೂಪಿಸಿರುವ ಯೋಜನೆಗಳಂತೆ ಮುಂದಿನ ಒಂದು ಅಥವಾ ಒಂದೂವರೆ ವರ್ಷಗಳ ಅವಧಿಯಲ್ಲಿ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು.
ಜಿಲ್ಲೆಯಲ್ಲಿನ ಬಹುತೇಕ ಎಲ್ಲಾ ಜಲಾಶಯಗಳು ಸುಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳ ಸ್ಥಿತಿಗತಿಗಳ ಕುರಿತು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಶೀಘ್ರದಲ್ಲಿ ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸಲಾಗುವುದು ಎಂದರು.