ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿ ವೈ ವಿಜಯೇಂದ್ರ ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದು ಬರಲಿ: ಬಿಜೆಪಿ ಶಾಸಕ ಒತ್ತಾಯ..!
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮರುಚುನಾವಣೆ ಗೆಲುವು ಕಾಂಗ್ರೆಸ್ ಭಿಕ್ಷೆಯಲ್ಲ ಬಿಜೆಪಿಯ ಶಕ್ತಿ ಎಂಬುದನ್ನು ತೋರಿಸಬೇಕು ಎಂದು ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಿ.ವೈ.ವಿಜಯೇಂದ್ರಗೆ ಶಾಸಕ ಸ್ಥಾನ ಕಾಂಗ್ರೆಸ್ ಭಿಕ್ಷೆ’ ಎಂಬ ಗಂಭೀರ ಆರೋಪವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ಹೊಂದಾಣಿಕೆ ರಾಜಕಾರಣದ ಆರೋಪಕ್ಕೆ ಇದು ಪುಷ್ಟಿ ನೀಡಿದೆ. ಇಂತಹ ಬ್ಲ್ಯಾಕ್ ಮೇಲ್ ಗೆ ಬಿ.ಎಸ್.ಯಡಿಯೂರಪ್ಪ ಕುಟುಂಬ ಸರಿಯಾಗಿ ಪ್ರತಿಕ್ರಿಯಿಸಬೇಕು ಎಂದರು.
ಕಾಂಗ್ರೆಸ್ ಭಿಕ್ಷೆಯಿಂದ ಶಾಸಕರಾಗುವ ಅನಿವಾರ್ಯತೆ ಬಿಜೆಪಿ ನಾಯಕರಿಗೆ ಇಲ್ಲ ಎಂಬುದನ್ನು ತೋರಿಸಬೇಕು ಎಂದು ಹೇಳಿದ್ದಾರೆ.
ಬಿ.ಎಸ್ ಯಡಿಯೂರಪ್ಪನವರು ಶ್ರೀಮಂತ ಕುಟುಂಬಗಳ ಸಂಘ ಬಯಸಿದ್ದು ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಯಿ ಕೂಡ ಅವರೊಂದಿಗೆ ಕೈಜೋಡಿಸಿದ್ದಾರೆ. ರಾಜ್ಯದಲ್ಲಿ ಹೋಂದಾಣಿಕೆ ರಾಜಕೀಯ ಅಸಹ್ಯ ಹುಟ್ಟಿಸಿದೆ ಎಂದು ಕಿಡಿಕಾರಿದರು.