ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಎಸ್ ವೈ ನಿವಾಸಕ್ಕೆ ಮುತ್ತಿಗೆ ಯತ್ನ..!
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಒಪ್ಪಿಗೆ ನೀಡಿದ ಹಿನ್ನೆಲೆ ಶಿಕಾರಿಪುದ ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನಿಸಿದರು.
ಶಿಕಾರಿಪುರದ ಮಾಳೇರ ಕೇರಿಯಲ್ಲಿ ಇರುವ ಮಾಜಿ ಸಿ ಎಂ ಯಡಿಯೂರಪ್ಪ ನಿವಾಸ ಕಾಂಗ್ರೆಸ್ ಕಾರ್ಯಕರ್ತರಿಂದ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಲಾಯಿತು.
ಮುತ್ತಿಗೆಗೂ ಮುನ್ನ ಕಾಂಗ್ರೆಸ್ ಕಚೇರಿ ಕಾರ್ಯಕರ್ತರು
ಸಭೆ ನಡೆಸಿದರು. ಎಸ್ ಪಿ ನಾಗರಾಜ್ ಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಯಡಿಯೂರಪ್ಪ ನಿವಾಸದ ಮುಂದೆ ಬಿಗಿ ಬಂದೋಬಸ್ತ್ ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು ಎರಡು ಕೆ ಎಸ್ ಆರ್ ಪಿ, ಎರಡು ಡಿ ಎ ಆರ್ ತುಕಡಿ ನಿಯೋಜನೆ ಮಾಡಲಾಗಿದ್ದು ಮುತ್ತಿಗೆ ಯತ್ನಿಸಿದ ಕಾರ್ಯಕರ್ತರನ್ನು ಪೋಲಿಸರು ವಶಕ್ಕೆ ಪಡೆದರು.