ಶಿಕಾರಿಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಅವಿರೋಧ ಆಯ್ಕೆ..!
ಶಿಕಾರಿಪುರ ಪಟ್ಟಣದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯನ್ನು ಬುಧವಾರ ಪುರಸಭೆ ಸಭಾಂಗಣದಲ್ಲಿ ನಡೆಸಲಾಯಿತು.
ಶಿಕಾರಿಪುರ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶೈಲಾ ಯೋಗೀಶ್ ಹಾಗೂ ಉಪಾಧ್ಯಕ್ಷರಾಗಿ ರೂಪಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿ ಸಾಗರ ಉಪವಿಭಾಗಾಧಿಕಾರಿ ಡಾ.ಯತೀಶ್ ಆರ್ ಅವರು ಚುನಾವಣೆ ನಡೆಸಿ ಘೋಷಿಸಿದ್ದಾರೆ.
ಈ ವೇಳೆ ನೂತನ ಅಧ್ಯಕ್ಷರು ಉಪಾಧ್ಯಕ್ಷರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಸಂಸದ ಬಿವೈ ರಾಘವೇಂದ್ರ ಅಭಿನಂದಿಸಿದ್ದಾರೆ.
ಈ ವೇಳೆ ಬಿಜೆಪಿ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದರು.